Freedom TV

ಬೆಂಗಳೂರಿನಲ್ಲಿ ವರುಣನ ಅಬ್ಬರ,ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಟ

ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಎಲ್ಲೆಡೆ ಮೋಡ ಕವಿದ ವಾತಾವರಣ ಇತ್ತು. ಆದರೆ ಇಂದು ನಗದೆಲ್ಲೆಡೆ ಮಧ್ಯಾಹ್ನದ ಬಳಿಕ ಮಳೆರಾಯ ಎಂಟ್ರಿಕೊಟ್ಟಿದ್ದಾನೆ. ಬಂಗಾಳಕೊಲ್ಲಿ, ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಿಲಿಕಾನ್​ ಸಿಟಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಭಾರಿ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದು ಸವಾರರ ಪರದಾಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಎಫೆಕ್ಟ್ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ಶುರುವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ ರಸ್ತೆ ಸೇರಿದಂತೆ ಹಲವೆಡೆ ಜೋರು ಮಳೆ ಸುರಿದಿದೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ.ಮಧ್ಯಾಹ್ನದ ಬಳಿಕ ಮಳೆರಾಯ ಎಂಟ್ರಿಕೊಟ್ಟ ಹಿನ್ನೆಲೆ ಮೆಜೆಸ್ಟಿಕ್, ಕೆಆರ್ ಸರ್ಕಲ್, ವಿಧಾನ ಸೌಧ ಸುತ್ತಮುತ್ತ ಬಾರೀ ಟ್ರಾಫಿಕ್ ಜಾಮ್​ ಉಂಟಾಗಿದೆ. ಜಾಮ್​ನಲ್ಲಿ ಸಿಲುಕಿ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇನ್ನು ಮಳೆಯಿಂದ ರಕ್ಷಣೆ ಪಡೆಯಲು ಜನರು ಫ್ಲೈಓವರ್ ಕೆಳಗೆ ನಿಂತ್ತುಕೊಂಡಿದ್ದಾರೆ. ಮಳೆ ಆರ್ಭಟಕ್ಕೆ ರಸ್ತೆಗಳು ಕೆರೆಯಂತಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕೂಡ ಬಿರುಗಾಳಿ ಸಹಿತ ಮಳೆ ಅಬ್ಬರಿಸಿದೆ.

Comments (0)

Your email address will not be published. Required fields are marked *

Back to top button