Freedom TV

ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ಜನಸ್ಪಂದನ : ಹರಿದು ಬಂದ ಜನಸಾಗರ

ಬೆಂಗಳೂರು: ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಆರ್.ಟಿ.ನಗರದ ಹೆಚ್.ಎಂ.ಟಿ ಮೈದಾನದಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮ ಜರುಗಿತು.

ರಾಜ್ಯ ಸರ್ಕಾರದ ಪಂಚ ಖಾತ್ರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಾಗಿದೆ. ಅದರ ಸದುಪಯೋಗ ಪಡಿಸಿಕೊಳ್ಳಲು ನೆರೆದಿದ್ದ ಜನರಿಗೆ ಸಚಿವರಾದ ಶ್ರೀ ಬೈರತಿ ಸುರೇಶ ಅವರು ಕರೆ ನೀಡಿದರು.

ಅಲ್ಲದೇ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಹವಾಲು ಬಂದಾಗ, ಬೇಸಿಗೆ ಮುಗಿಯುವ ವರೆಗೂ ಕ್ಷೇತ್ರದಾದ್ಯಂತ 8 ಟ್ಯಾಂಕರ್ ಗಳನ್ನು ಒದಗಿಸಲಾಗಿದೆ. ಕಡಿಮೆ ಬಂದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಒದಗಿಸಲಾಗುತ್ತದೆ ಎಂದು ಸಚಿವರಾದ ಶ್ರೀ ಬೈರತಿ ಸುರೇಶ ಅವರು ತಿಳಿಸಿದರು.

Comments (0)

Your email address will not be published. Required fields are marked *

Back to top button