ದೇಶ/ವಿದೇಶ
ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ!
Helicopter traveling from Badrinath to Dehradun crashes!

ಡೆಹ್ರಾಡೂನ್ : ಉತ್ತರಾಖಂಡ್‌ನಲ್ಲಿ ಭೀಕರ ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಬದರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಹಾಥಿ ಪರ್ವತ ಪ್ರದೇಶದ ಬಳಿ ಪತನಗೊಂಡಿದೆ.
ಹೆಲಿಕಾಪ್ಟರ್‌ನಲ್ಲಿ ಓರ್ವ ಪೈಲಟ್ ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಕರಿದ್ದರು. ಬದರಿನಾಥದಿಂದ ಡೆಹ್ರಾಡೂನ್‌ಗೆ ಪ್ರಯಾಣ ಬೆಳೆಸಿದ್ದ ಹೆಲಿಕಾಪ್ಟರ್, ಹಾಥಿ ಪರ್ವತ ಪ್ರದೇಶದ ಬಳಿ ಪತನವಾಗಿದೆ.
ಬದರಿನಾಥ ಧಾಮದಿಂದ ಹೊರಟಿದ್ದ ಈ ಹೆಲಿಕಾಪ್ಟರ್, ಬದರಿನಾಥ ಮತ್ತು ಜೋಶಿಮಠ ನಡುವೆ ಹಾರಾಟ ನಡೆಸುತ್ತಿದ್ದ ವೇಳೆ ಏಕಾಏಕಿ ನಾಪತ್ತೆಯಾಗಿದ್ದು, ನಿಯಂತ್ರಣ ಕೊಠಡಿಯೊಂದಿಗಿನ ಸಂಪರ್ಕ ಕಡಿದುಕೊಂಡಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಆಡಳಿತ, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ಪೊಲೀಸ್ ಸಿಬ್ಬಂದಿ ಕೂಡಲೇ ರಕ್ಷಣಾ ಕಾರ್ಯಾಚರಣೆಗಾಗಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.




