ಫ್ರೀಡಂ ಟಿವಿ ಡೆಸ್ಕ್
ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಬ್ರೈನ್ ಹ್ಯಾಮರೇಜ್ನಿಂದ ಬಳಲುತ್ತಿರುವ ಹಿರಿಯ ನಟಿ ಹೇಮ ಚೌಧರಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೇಮಾ ಅವರ ಮಗ ಐರ್ಲೆಂಡ್ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಹೇಮಾ ಕಾಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.
ಕನ್ನಡದಲ್ಲಿ ಹಲವು ಚಿತ್ರಗಳಲ್ಲಿ ಹೇಮ ಚೌಧರಿ ಅವರು ನಟಿಸಿದ್ದಾರೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇತ್ತಿಚೆಗಷ್ಟೆ ಕನ್ನಡದ ಹಿರಿಯ ನಟಿ ಲೀಲಾವತಿ ನಿಧನ ಹೊಂದಿದ್ದರು. ಲೀಲಾವತಿ 11 ನೇ ದಿನದ ಪುಣ್ಯಸ್ಮರಣೆಗೂ ಸಹ ಆಗಮಿಸಿದ್ದರು. ವಿನೋದ್ ರಾಜ್ಗೆ ಸಾಂತ್ವಾನ ಹೇಳಿದ್ದರು. ಆದರೆ ಏಕಾಏಕಿ ಈ ರೀತಿ ಆಗಿದೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ಎಲ್ಲಾ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.