ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರಿಗೆ ಬಡ್ತಿ ಸಿಕ್ಕಿದೆ. ಐಜಿಪಿ ದರ್ಜೆಯಿಂದ ಎಡಿಜಿಪಿ ಶ್ರೇಣಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ವಾರ್ತಾ ಇಲಾಖೆ ಆಯುಕ್ತರಾಗಿರುವ ಹೇಮಂತ್ ನಿಂಬಾಳ್ಕರ್ ಅವರಿಗೆ ಬಡ್ತಿ ನೀಡಿ ಆಯುಕ್ತರ ಹುದ್ದೆಯಲ್ಲಿ ಮುಂದುವರಿಸಿ ಸರ್ಕಾರ ಆದೇಶಿಸಿದೆ.
ಇನ್ನು, 1998ನೇ ಬ್ಯಾಚಿನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾದ ಹೇಮಂತ್ ನಿಂಬಾಳ್ಕರ್ ಅವರು ಅವರು 2023ರ ಜೂನ್‌ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ನೇಮಕಗೊಂಡಿದ್ದರು. ಈ ಹಿಂದೆ ಬೆಳಗಾವಿ ಎಸ್‌ಪಿ, ಬೆಂಗಳೂರಿನ ಜಂಟಿ ಆಯುಕ್ತ (ಸಿಸಿಬಿ), ಹೆಚ್ಚುವರಿ ಆಯುಕ್ತ ಹೆಚ್ಚುವರಿ ಆಯುಕ್ತ ಹಾಗೂ ಸಿಐಡಿ ಐಜಿಪಿ ಸೇರಿದಂತೆ ವಿವಿಧ ಹುದ್ದೆಗಳನ್ನು ಹೇಮಂತ್ ನಿಂಬಾಳ್ಕರ್ ಅವರು ನಿರ್ವಹಿಸಿದ್ದರು.
ಅದಲ್ಸಿಲದೇ ಸಿಬಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದ ಹೇಮಂತ್ ನಿಂಬಾಳ್ಕರ್ ಅವರು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದ ವಿಶ್ವದ ಅತ್ಯುಗ್ರ ಸಂಘಟನೆಯಾದ ಐಸಿಸ್‌ನ ಟ್ವೀಟರ್ ಹ್ಯಾಂಡ್ಲರ್ ಮೆಹದಿ ಬಿಸ್ವಾಸ್‌ನನ್ನು ಬಂಧಿಸಿದ್ದರು. ಕ್ರಿಕೆಟ್ ಬೆಟ್ಟಿಂಗ್, ಜೂಜು ಅಡ್ಡೆ ಹಾಗೂ ರಿಯಲ್ ಎಸ್ಟೇಟ್ ಮಾಫಿಯಾಗಳಿಗೆ ದುಸ್ವಪ್ನವಾಗಿ ಕಾಡಿದ್ದರು. ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದಾಗ ಕಮ್ಮನಹಳ್ಳಿಯ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳನ್ನು ಕೆಲವೇ ತಾಸಿನೊಳಗೆ ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿದ್ದರು. ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಒಂದಂಕಿ ಲಾಟರಿ ಪ್ರಕರಣದ ತನಿಖೆಯನ್ನು ಸಿಐಡಿ ಐಜಿಪಿಯಾಗಿದ್ದಾಗ ತನಿಖೆ ನಡೆಸಿದ್ದರು. ಅಲ್ಲದೆ ಕ್ರಿಕೆಟ್ ಬೆಟ್ಟಿಂಗ್ ದಂದೆ ವಿರುದ್ಧ ಸಹ ವಿಶೇಷ ಕಾರ್ಯಾಚರಣೆ ನಡೆಸಿ ಬಿಸಿ ಮುಟ್ಟಿಸಿದ್ದರು