ಬೆಳಗಾವಿ: ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಪಾಲಿಟಿಕ್ಸ್ ಮತ್ತೆ ಗರಿಗೆದರಿದೆ. ಒಳಗೊಳಗೆ ಮೀಟಿಂಗ್ಗಳು ನಡೀತಿದ್ದು, ನಾಯಕತ್ವದ ಬದಲಾವಣೆ ವಿಚಾರ ಭಾರೀ ಚರ್ಚೆ ಆಗ್ತಿದೆ. ಇದೀಗ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ಧಾರೆ..
ಬೆಳಗಾವಿಯಲ್ಲಿ ಮಾತಾಡಿದ ಅವರು, ನನ್ನ ತಂದೆಯೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ.ಲೀಡರ್ ಶಿಪ್ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿಯೇ ಹೇಳಿದೆ ಎಂದು ಸಿಎಂ ಪುತ್ರ ಡಾ. ಯತೀಂದ್ರ ಹೇಳಿಕೆ ನೀಡಿದ್ದಾರೆ. ಯತೀಂದ್ರ ಅವರ ಇವತ್ತಿನ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿಲ್ಲ. ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡಲಿದ್ದಾರೆ ಎಂದಷ್ಟೇ ಹೇಳಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ಇತ್ತಿಚೇಗೆ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದರು. ಹೈಕಮಾಂಡ್ ಹೇಳುವವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ತಿಳಿಸಿದ ನಂತರ ಈ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ಕೂಡ ಕುರ್ಚಿ ಕಿತ್ತಾಟದ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಿದ್ದರೂ ಪುತ್ರ ಮತ್ತೆ ಈ ವಿಚಾರವನ್ನು ಕೆದಕಿ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ..


