ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ನೆನ್ನೆ ರಾತ್ರಿಯಿಂದ ಪೊಲೀಸ್​ ಕಸ್ಟಡಿಯಲ್ಲಿದ್ದ ಸಿಟಿ ರವಿಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ.ರವಿಗೆ ಷರತ್ತನ್ನು ಕೋರ್ಟ್‌ ವಿಧಿಸಿದೆ.

Leave a Reply

Your email address will not be published. Required fields are marked *

Verified by MonsterInsights