Top Newsರಾಜಕೀಯರಾಜ್ಯಸುದ್ದಿ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸಿನಲ್ಲಿ ಬಿಜೆಪಿ ಎಂಎಲ್​​ಸಿ ಮಾಜಿ ಸಚಿವ ಸಿಟಿ ರವಿಗೆ ಮೊದಲ ಜಯ ಸಿಕ್ಕಿದೆ. ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.

ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್​​​ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಸಚಿವೆ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪವಿದೆ. ಆದರೆ ಈ ಆರೋಪವನ್ನು ಸಿಟಿ ರವಿ ಅಲ್ಲಗಳದಿದ್ದಾರೆ. ಮತ್ತೊಂದೆಡೆ, ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಆದರೆ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ವಾಯ್ಸ್ ಸ್ಯಾಂಪಲ್ ನೀಡಲು ಅವರು ನಿರಾಕರಿಸಿದ್ದರು. ಈ ವಿಚಾರದ ಬಗ್ಗೆಯೂ ಹೈಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.

ಸಿ ಟಿ ರವಿ ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಆದರೆ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ವಾಯ್ಸ್ ಸ್ಯಾಂಪಲ್ ನೀಡಲು ಅವರು ನಿರಾಕರಿಸಿದ್ದರು. ಈ ವಿಚಾರದ ಬಗ್ಗೆಯೂ ಹೈಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.

Comments (0)

Your email address will not be published. Required fields are marked *

Back to top button