ರಾಜಕೀಯರಾಜ್ಯಸುದ್ದಿ

ಜಾತಿ ಗಣತಿಗೆ ತಡೆ ನೀಡಲು ಹೈಕೋರ್ಟ್ ನಕಾರ; ದತ್ತಾಂಶವನ್ನು ರಕ್ಷಿಸಲು ಆದೇಶ

ಬೆಂಗಳೂರು: ಜಾತಿಗಳ ಸಾಮಾಜಿಕ ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್​ ನಿರಾಕರಿಸಿದೆ.ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ, ಎರಡು ದಿನ ವಾದ ಪ್ರತಿವಾದ ಆಲಿಸಿದ್ದು, ಅಂತಿಮವಾಗಿ ಇಂದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ.

ದತ್ತಾಂಶವನ್ನು ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು.ದತ್ತಾಂಶದ ಗೌಪ್ಯತೆಯನ್ನು ಹಿಂದುಳಿದ ವರ್ಗಗಳ ಆಯೋಗ ರಕ್ಷಿಸಬೇಕು. ಜನರು ಸ್ವಯಂಪ್ರೇರಣೆಯಿಂದ ನೀಡಿದರಷ್ಟೇ ಮಾಹಿತಿ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತುಗಳನ್ನು ವಿಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಈ ಪ್ರಕರಣ ಇತ್ಯರ್ಥವಾಗುವರೆಗೆ ಯಾವುದೇ ಕಾರಣಕ್ಕೂ ಸಂಗ್ರಹಿಸಿದ ಮಾಹಿತಿ ಸೋರಿಕೆ ಆಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಆಯೋಗ ಅಫಿಡವಿಟ್‌ ಸಲ್ಲಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಷರತ್ತು ವಿಧಿಸಿ ಡಿಸೆಂಬರ್ ಎರಡನೇ ವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

Comments (0)

Your email address will not be published. Required fields are marked *

Back to top button