Thursday, January 29, 2026
16.4 C
Bengaluru
Google search engine
LIVE
ಮನೆರಾಜಕೀಯಮಾಜಿ ಸಿಎಂ ಬಿಎಸ್​​ ವೈ ವಿರುದ್ಧ ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ನಕಾರ

ಮಾಜಿ ಸಿಎಂ ಬಿಎಸ್​​ ವೈ ವಿರುದ್ಧ ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ನಕಾರ

ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈ ಕೋರ್ಟ್​​​ ನಿರಾಕರಿಸಿದೆ..

ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಯಡಿಯೂರಪ್ಪ ನನ್ನ ವಿರುದ್ಧ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂಐ ಅರುಣ್ ವಿಚಾರಣೆ ನಡೆಸಿದರು. ಆಪಾದಿತ ಅಪರಾಧವನ್ನು ಗಮನದಲ್ಲಿಟ್ಟುಕೊಂಡು, ಬಿಜೆಪಿ ಹಿರಿಯ ನಾಯಕನಿಗೆ ಸಮನ್ಸ್ ಜಾರಿ ಮಾಡಿದ್ದ ವಿಚಾರಣಾ ನ್ಯಾಯಾಲಯದ ಫೆಬ್ರುವರಿ 28ರ ಆದೇಶವನ್ನು ಪೀಠ ಎತ್ತಿಹಿಡಿದಿದೆ.

ಆದರೆ, ಪ್ರಕರಣದ ವಿಚಾರಣೆ ವೇಳೆ ಅನಗತ್ಯವಾಗಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಒತ್ತಾಯಿಸಬಾರದು. ಅವರ ಉಪಸ್ಥಿತಿ ಅಗತ್ಯವಿಲ್ಲದಿದ್ದರೆ, ವಿಚಾರಣೆಗೆ ಹಾಜರಾಗುವುದಕ್ಕೆ ವಿನಾಯಿತಿ ಕೋರಿ ಅವರ ಪರವಾಗಿ ಸಲ್ಲಿಸಲಾದ ಯಾವುದೇ ಅರ್ಜಿಯನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಆರೋಪ ಕೈಬಿಡುವುದು ಸೇರಿದಂತೆ ಯಾವುದೇ ಅರ್ಜಿಗಳನ್ನು ಸಲ್ಲಿಸಲು ಅರ್ಜಿದಾರರು ಸ್ವತಂತ್ರರಾಗಿದ್ದಾರೆ ಎಂದು ಏಕಸದಸ್ಯ ಪೀಠ ಸ್ಪಷ್ಟಪಡಿಸಿತು.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ, 2024ರ ಫೆಬ್ರುವರಿಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆದ ಸಭೆಯ ಸಂದರ್ಭದಲ್ಲಿ ಯಡಿಯೂರಪ್ಪ ಅವರು ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಸದಾಶಿವನಗರ ಪೊಲೀಸರು ಮಾರ್ಚ್ 14, 2024 ರಂದು ಪ್ರಕರಣ ದಾಖಲಿಸಿಕೊಂಡಿದ್ದು, ನಂತರ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಲಾಯಿತು. ಸಂಸ್ಥೆಯು ಎಫ್‌ಐಆರ್ ಮರು ದಾಖಲಿಸಿ, ಮಾಜಿ ಸಿಎಂ ವಿರುದ್ಧ ಆರೋಪಪಟ್ಟಿ ಸಲ್ಲಿಸಿತು. ಯಡಿಯೂರಪ್ಪ ಪರ ಹಾಜರಾದ ಹಿರಿಯ ವಕೀಲ ಸಿವಿ ನಾಗೇಶ್, ಪ್ರಕರಣವು ರಾಜಕೀಯ ಪ್ರೇರಿತವಾಗಿದ್ದು, ದೂರಿನಲ್ಲಿ ವಿಶ್ವಾಸಾರ್ಹತೆಯ ಕೊರತೆಯಿದೆ ಎಂದು ವಾದಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments