Tuesday, February 10, 2026
22.9 C
Bengaluru
Google search engine
LIVE
ಮನೆಜಿಲ್ಲೆಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ರಿಲೀಫ್, ಪೋಸ್ಟ್ ಹಾಕಿದರೆ ಕೇಸ್ ಫಿಕ್ಸ್!

ಪುನೀತ್ ಕೆರೆಹಳ್ಳಿಗೆ ಹೈಕೋರ್ಟ್ ರಿಲೀಫ್, ಪೋಸ್ಟ್ ಹಾಕಿದರೆ ಕೇಸ್ ಫಿಕ್ಸ್!

ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ ವಿಚಾರವಾಗಿ ಬೆಂಗಳೂರಿನ ಚನ್ನಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ರದ್ದತಿ ಕೋರಿ ಪುನೀತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಈ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

ಅಕ್ರಮ ವಲಸಿಗರ ಬಗ್ಗೆ ಧ್ವನಿ ಎತ್ತುವುದು ತಪ್ಪಲ್ಲ, ಆದರೆ ಅದನ್ನು ವ್ಯಕ್ತಪಡಿಸುವ ವಿಧಾನ ಸರಿಯಿರಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.ವಿಚಾರಣೆ ವೇಳೆ ಪೊಲೀಸರ ಪರವಾಗಿ ಹಾಜರಿದ್ದ ಹೆಚ್ಚುವರಿ ಎಸ್‌ಪಿಪಿ ಬಿ.ಎನ್. ಜಗದೀಶ್ ಅವರು, ಪ್ರಕರಣಕ್ಕೆ ತಡೆ ನೀಡಿದ ಬೆನ್ನಲ್ಲೇ ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರನ್ನು ನಿಂದಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ಪುನೀತ್ ಕೆರೆಹಳ್ಳಿ ಅವರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಅಥವಾ ಪೋಸ್ಟ್ ಮಾಡುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳಬಾರದು ಎಂದು ಪೀಠವು ಖಡಕ್ ಎಚ್ಚರಿಕೆ ನೀಡಿದೆ.

ಪ್ರಕರಣಕ್ಕೆ ತಡೆ ನೀಡಿದ್ದರೂ ಸಹ, ಇನ್ನು ಮುಂದೆ ಬಾಕಿ ಇರುವ ಕೇಸ್‌ಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಹೇಳಿಕೆ ನೀಡದಂತೆ ಪುನೀತ್ ಕೆರೆಹಳ್ಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಅಷ್ಟೇ ಅಲ್ಲದೆ, ಸಂಬಂಧಪಟ್ಟ ಡಿಸಿಪಿ ಮುಂದೆ ಹಾಜರಾಗಿ ಈ ಬಗ್ಗೆ ಮುಚ್ಚಳಿಕೆ ಪತ್ರ ನೀಡುವಂತೆ ಸೂಚಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಪೊಲೀಸರ ವಿರುದ್ಧ ಅಥವಾ ಪ್ರಕರಣದ ಕುರಿತು ಪೋಸ್ಟ್ ಹಾಕಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments