ಬೆಂಗಳೂರು: ಹಿಂಬಾಕಿ ಪಾವತಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಡೆಸುತ್ತಿರುವ ಸತ್ಯಾಗ್ರಹ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸಾರಿಗೆ ನೌಕರರ ಒಕ್ಕೂಟವನ್ನು ತರಾಟೆಗೆ ತೆಗೆದುಕೊಂಡಿದೆ.
ಎಲ್ಲಾ ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದ ಪೀಠ, ಮುಷ್ಕರ ಮುಂದುವರಿಸಿದರೆ ಎಸ್ಮಾ ಅಡಿ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಅವಕಾಶವಿದೆ ಎಂದು ಎಚ್ಚರಿಕೆ ಕೊಟ್ರು. ಮುಷ್ಕರಕ್ಕೆ ತಡೆ ನೀಡಿದ್ದ ಮಧ್ಯಂತರ ಆದೇಶವನ್ನು ಎರಡು ದಿನ ವಿಸ್ತರಿಸಿದ ನ್ಯಾಯಾಲಯ, ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿತು.. ಈ ಬೆನ್ನಲ್ಲೇ ಸಾರಿಗೆ ನೌಕರರ ಸಂಘಟನೆಗಳು ಮುಷ್ಕರವನ್ನು ಹಿಂಪಡೆದಿವೆ.