ರಾಜಕೀಯ

ಹೆಚ್​​.ಡಿ.ಕುಮಾರಸ್ವಾಮಿಗೆ ‘ಹೈ’ ರಿಲೀಫ್

ಬೆಂಗಳೂರು: ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ವಿರುದ್ಧ ಭೂಮಿ ಒತ್ತುವರಿ ಆರೋಪ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ.

ರಾಮನಗರ ಜಿಲ್ಲೆ ಬಿಡದಿಯ ಕೇತಗಾನಹಳ್ಳಿ ಬಳಿ, 6 ಎಕರೆ ಭೂಮಿ ಒತ್ತುವರಿ ಸಂಬಂಧ, ಇಂದು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯ್ತು. ತಹಶೀಲ್ದಾರ್‌ ನೋಟಿಸ್‌ ಪ್ರಶ್ನಿಸಿ, ಹೈಕೋರ್ಟ್‌ಗೆ ಹೆಚ್​​ಡಿಕೆ ಅರ್ಜಿ ಸಲ್ಲಿಸಿದ್ರು. ಇಂದು ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್ ಪೀಠ, ಮಧ್ಯಂತರ ಆದೇಶ ನೀಡಿದೆ. ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದೆಂದು ಸೂಚಿಸಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

Comments (0)

Your email address will not be published. Required fields are marked *

Back to top button