ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಹೈಲೈಟ್ಸ್…
ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ
ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ
ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ
ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಟಾಸ್ಕ್ ಫೋರ್ಸ್ ನಲ್ಲಿ ಇರುತ್ತಾರೆ
ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್ ಪಿ, ಎಸಿಪಿ ಮತ್ತು SP ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಇವರ ವಿರುದ್ಧವೇ ಕ್ರಮ ಖಚಿತ
ಅಗತ್ಯಬಿದ್ದರೆ ಹೊಸ ಕಾನೂನು ಮಾಡ್ತೇವೆ. ಇರುವ ಕಾನೂನನ್ನು ಇನ್ನಷ್ಟು ಗಟ್ಟಿ ಮಾಡ್ತೇವೆ
ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ
NCC, NGO ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ
ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ
ಡ್ರಗ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ
ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತಗತಿರುವುದನ್ನು ತಡೆಯಲು ಕ್ರಮ
ಡ್ರಗ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್
ಪೊಲೀಸರಿಗೆ free hand ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತಗೊತೀವಿ
ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ
ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ
ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ
ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ
ಬೆಂಗಳೂರು EAST ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ ಹಾಕಲು ನಿರ್ಣಯ ಮಾಡಿದ್ದೇವೆ
ಒಡಿಶ್ಶಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ supply ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ
(ಎರಡನೇ ವಿಷಯದ ಪತ್ರಿಕಾಗೋಷ್ಠಿ ಮುಂದುವರೆದಿದೆ)