ಮಂಡ್ಯ : ಮೂವತ್ತು ವರ್ಷಗಳ ಬಳಿಕ ಈ ಬಾರಿ ಸಕ್ಕರೆ ನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲಿದೆ. ಈ ನುಡಿಜಾತ್ರೆಯನ್ನು ಸಾಕಷ್ಟು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಡಿ.20 ಮತ್ತು 21ರಂದು ರಜೆ ಘೋಷಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಬುಧವಾರ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ನಾಡು-ನುಡಿ ಬಗ್ಗೆ ಅಭಿಮಾನ ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಭಾಗಿಯಾಗಬೇಕು. ಆ ನಿಟ್ಟಿನಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಡಿ.20, 21 ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.

 

Leave a Reply

Your email address will not be published. Required fields are marked *

Verified by MonsterInsights