Wednesday, April 30, 2025
34.5 C
Bengaluru
LIVE
ಮನೆಜಿಲ್ಲೆಹನಿ..ಹನಿ..ಬ್ಲ್ಯಾಕ್ ಮೇಲ್ ಕಹಾನಿ ಬೆತ್ತಲೇ ಫೋಟೋ..ಕೈ ತುಂಬ ಕಾಸು!

ಹನಿ..ಹನಿ..ಬ್ಲ್ಯಾಕ್ ಮೇಲ್ ಕಹಾನಿ ಬೆತ್ತಲೇ ಫೋಟೋ..ಕೈ ತುಂಬ ಕಾಸು!

ಮೈಸೂರು: ಹನಿಟ್ರ್ಯಾಪ್ ಮೂಲಕ ಅಮಾಯಕರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್ ಅನ್ನು ಮೈಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಓರ್ವ ಮಹಿಳೆ‌ ಸೇರಿದಂತೆ ಮೂವರು ಬಂಧಿತರಾಗಿದ್ದು, ಫಜಲುಲ್ಲಾ ರೆಹಮಾನ್, ರಿಜ್ವಾನ್, ಮೋನಾ ಬಂಧಿತ ಆರೋಪಿಗಳಾಗಿದ್ದಾರೆ.
ಉದ್ಯಮಿ ಸುನ್ನಿ ಎಂಬುವರು ಚೆನ್ನೈನಿಂದ ಮೈಸೂರು ಮಾರ್ಗವಾಗಿ ಕೇರಳಕ್ಕೆ ಹೋಗುತ್ತಿದ್ದರು. ದಾರಿ ಮಧ್ಯೆ ಸುನ್ನಿ ಅವರಿಗೆ ಆರೋಪಿಗಳು ಪರಿಚಯವಾಗಿದ್ದಾರೆ. ಬಳಿಕ ಆರೋಪಿಗಳು ಮಾನಂದವಾಡಿ ರಸ್ತೆಯಲ್ಲಿ ಸುನ್ನಿ ಅವರ ಕಾರು ಅಡ್ಡಗಟ್ಟಿದ್ದಾರೆ.

ಸುನ್ನಿ ಅವರನ್ನು ಬಲವಂತವಾಗಿ ಮನೆಯೊಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಮೋನ ಜೊತೆ ನಗ್ನವಾಗಿ ಮಲಗಿಸಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾರೆ. ನಂತರ ಫೋಟೋ ಹಾಗೂ ವಿಡಿಯೋಗಳನ್ನು ಸುನ್ನಿ ಅವರಿಗೆ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾರೆ.
ನಮಗೆ 10 ಲಕ್ಷ ರೂ. ಕೊಡು ಇಲ್ಲವಾದರೇ ಈ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಆಗ ಉದ್ಯಮಿ ಸುನ್ನಿ ಅವರು 5 ಲಕ್ಷ ರೂ. ನೀಡಿದ್ದಾರೆ. ಬಳಿಕ ಆರೋಪಿಗಳು ಸುನ್ನಿ ಅವರು ಧರಿಸಿದ್ದ ಚಿನ್ನದ ಉಂಗುರ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.

ಸುನ್ನಿ ಅವರು ಕೇರಳದ ತಿರುನೆಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೃತ್ಯ ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿನ್ನೆಲೆಯಲ್ಲಿ ಪ್ರಕರಣ ಇಲ್ಲಿಗೆ ವರ್ಗಾವಣೆಯಾಗಿತ್ತು. ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಚಾರಣೆ ವೇಳೆ ಇದೇ ತಂಡ ಮಡಿಕೇರಿಯಲ್ಲೂ ಇಂತಹದ್ದೇ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಂಧಿತರಿಂದ 50 ಸಾವಿರ ನಗದು ಮತ್ತು ಕೃತ್ಯಕ್ಕೆ ಬಳಸಿದ ಇನೋವಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments