ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಹನಿಟ್ರ್ಯಾಪ್ ವಿಚಾರ ದೊಡ್ಡ ಸದ್ದು ಮಾಡುತ್ತಿದೆ. ವಿಧಾನಸಭೆ ಅಧಿವೇಶನದಲ್ಲಿ ಸಚಿವ ರಾಜಣ್ಣ ಸ್ಪೋಟಕ ಹೇಳಿಕೆ ಕೊಟ್ಟ ಬಳಿಕ ಕಾಂಗ್ರೆಸ್ ಹೈಕಮಾಂಡ್ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ಭೇಟಿ ಮಾಡಿ ಸಿದ್ದರಾಮಯ್ಯ ಅವರ ಬಳಿ ಹನಿಟ್ರ್ಯಾಪ್ ಬಗ್ಗೆಯೇ ಮಹತ್ವದ ಚರ್ಚೆ ನಡೆಸಿದ್ದಾರೆ. ಸಿಎಂ ಆರೋಗ್ಯ ವಿಚಾರಿಸಲು ತೆರಳಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸಾಥ್ ನೀಡಿದ್ದರು.
ಸಿಎಂ ಆರೋಗ್ಯ ವಿಚಾರಿಸುವ ನೆಪದಲ್ಲಿ ದಿಢೀರ್ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ ಅವರು, ವಿಧಾನಸಭೆಯಲ್ಲಿ ಸಚಿವ ರಾಜಣ್ಣ ಅವರು ಪ್ರಸ್ತಾಪಿಸಿರುವ ಹನಿಟ್ರ್ಯಾಪ್ ವಿಚಾರವಾಗಿ ಸುಮಾರು 20 ನಿಮಿಷಗಳ ಕಾಲ ರಹಸ್ಯವಾದ ಮಾತುಕತೆ ನಡೆಸಿದ್ದಾರೆ.
ಇನ್ನು ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್ ವಿಚಾರ ಸದ್ಯ ಹೈಕಮಾಂಡ್ ಅಂಗಳ ತಲುಪಿದ್ದು, ಮುಂದಿನ ದಿನಗಳಲ್ಲಿ ಚರ್ಚೆ ಯಾವ ಸ್ವರೋಪ ಪಡೆಯಲಿದೆ ಕಾದು ನೋಡಬೇಕು.


