ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ವಿಚಾರ ಸಂಚಲನ ಸೃಷ್ಟಿಸಿದೆ. ಬಜೆಟ್ ಅಧಿವೇಶನದಲ್ಲಿಯೂ ಸಹ ಈ ವಿಷಯ ಪ್ರಸ್ತಾಪವಾಗಿದ್ದು, ಸರ್ಕಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹನಿಟ್ರ್ಯಾಪ್ ವಿಚಾರ ನನಗೆ ಗೊತ್ತಿಲ್ಲ. ಮೊದಲು ಪೋಲಿಸ್ ಠಾಣೆಗೆ ಹೋಗಿ ದೂರು ಕೊಡಲಿ. ಈ ಬಗ್ಗೆ ತನಿಖೆ ಆಗಬೇಕು ಎಂದು ನಾನು ಸಹ ಒತ್ತಾಯ ಮಾಡುತ್ತೇನೆ ಅಂತ ಹೇಳಿದ್ದಾರೆ.
ಬಜೆಟ್ ಅಧಿವೇಶನ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಸ್ಫೋಟಗೊಂಡಿತ್ತು. ಈ ವೇಳೆ ರಾಜ್ಯದ ಪ್ರಭಾವಿ ಸಚಿವರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಲಾಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಅಲ್ಲದೇ ನೇರವಾಗಿ ಸಹಕಾರಿ ಸಚಿವ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ವಿಚಾರವು ಕೇಳಿಬಂದಿತ್ತು. ಈ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು ಅಂತ ಆಗ್ರಹಿಸಿದ್ದಾರೆ.