Freedom TV

ಗ್ವಾಲಿಯರ್‌ನಲ್ಲಿ ಭೀಕರ ಅಪಘಾತ – ಟ್ರಕ್ ಹರಿದು 12 ಭಕ್ತರು ದುರ್ಮರಣ!

Horrific accident in Gwalior – 12 devotees killed after being run over by a truck!

ಗ್ವಾಲಿಯರ್ : ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ನಿಯಂತ್ರಣ ತಪ್ಪಿದ ಟ್ರಕ್ ಭಕ್ತರ ಮೇಲೆ ಹರಿದ ಪರಿಣಾಮ 12 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತದಲ್ಲಿ ಸುಮಾರು 39 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಭತ್ತ ತುಂಬಿಕೊಂಡು ಛಿನೋರ್ ಕಡೆಯಿಂದ ಬರುತ್ತಿದ್ದ ಟ್ರಕ್, ಚಿನೂರಿನ ಶೀತಲಾ ಮಾತಾ ದೇಗುಲದ ಬಳಿ ಬರುತ್ತಿದ್ದಂತೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ವೇಗವಾಗಿ ಬಂದ ಟ್ರಕ್ ನೇರವಾಗಿ ದೇವಾಲಯದ ಗೇಟ್ ಹಾಗೂ ಬ್ಯಾರಿಕೇಡ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ಒಟ್ಟು 39 ಮಂದಿ ಗಾಯಗೊಂಡಿದ್ದರು. ಆ ಪೈಕಿ 12 ಜನ ಮೃತಪಟ್ಟಿದ್ದರೆ ಉಳಿದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐದರಿಂದ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರಲ್ಲಿ ಕೆಲವರಿಗೆ ಮೂಳೆ ಮುರಿತವಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನಾ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯೂ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗ್ವಾಲಿಯರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಧರ್ಮವೀರ್ ಸಿಂಗ್ ಮಾಹಿತಿ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button
Verified by MonsterInsights