ಕ್ರೈಂ ಸ್ಟೋರಿ

ಕಲಬುರಗಿಯಲ್ಲಿ ಆ್ಯಕ್ಸಿಡೆಂಟ್; ಮೃತರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ

ಬಾಗಲಕೋಟೆ : ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬಳಿ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ತೆಂಗಿನಮಠದ ಇಬ್ಬರು ಮಕ್ಕಳು ಸೇರಿ ಐವರು‌ ಮೃತಪಟ್ಟ ದುರಂತ ಬಹಳ ನೋವು ತರಿಸಿದೆ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಬಿಟಿಡಿಎ ಅಧ್ಯಕ್ಷರೂ ಆಗಿರುವ ಶಾಸಕ ಎಚ್.ವೈ. ಮೇಟಿ ತಿಳಿಸಿದ್ದಾರೆ.

ಈ‌ ಘಟನೆಯಲ್ಲಿ ಇಬ್ಬರು ಮಕ್ಕಳು ಅಸುನೀಗಿದ್ದಾರೆ. ಐವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಟ್ಟು ಐವರು ಮೃತಪಟ್ಟು, 11 ಜನ ಗಾಯಗೊಂಡ ಘಟನೆ ಬಹಳ ಬೇಸರ ತರಿಸಿದೆ ಎಂದು ಹೇಳಿದ್ದಾರೆ.
ಈ ಘಟನೆಯಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರೆಲ್ಲ ಬಡ ಕೂಲಿ ಕಾರ್ಮಿಕ ಕುಟುಂಬದವರಾಗಿದ್ದಾರೆ. ಇವರಿಗೆ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ ಮಾತಾಡಿದ್ದು, ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಘೋಷಣೆ ಮಾಡಿದ್ದಾರೆ ಎಂದು ಶಾಸಕ ಮೇಟಿ ತಿಳಿಸಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಕಲಬುರಗಿಯ ಎರಡೂ ಆಸ್ಪತ್ರೆಗಳ ವೈದ್ಯರಿಗೆ ಕೋರಲಾಗಿದೆ. ಗಾಯಗೊಂಡವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button