ಜಿಲ್ಲೆ

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ – ಒಂದೇ ಕುಟುಂಬದ ಮೂವರು ದುರ್ಮರಣ!

Horrific road accident in Haveri – three members of the same family killed!

ಹಾವೇರಿ : ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಣೇಬೆನ್ನೂರು ಕಡೆಯಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರೊಂದು, ನಿಸರ್ಗ ಢಾಬಾ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ ಚಾಲಕ ಸಿದ್ಧಾರ್ಥ್, ಅವರ ಅಣ್ಣ ಹಸನ್ಮುಖಿ ಹಾಗೂ ತಾಯಿ ಯಶೋಧಾಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸೌಂದರ್ಯ, ಸಿಂಧು ಹಾಗೂ 1 ವರ್ಷದ ಮಗು ಕಶ್ವಶ್ರೀ ಗಂಭೀರ ಗಾಯಗೊಂಡಿದ್ದು, ಅವರನ್ನು ದಾವಣಗೆರೆ ಎಸ್.ಎಸ್. ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button