ಕಲಬುರಗಿ: ಜೇವರ್ಗಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಹೊರರೋಗಿಗಳ ವಿಭಾಗದ ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆ ಸಿಬ್ಬಂದಿ ಭಕ್ತಿ ಗೀತೆ, ದೇವರ ಸ್ತೋತ್ರಗಳನ್ನು ಬರೆದಿರುವುದು ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.
ತಾಲೂಕಿನ ಮಾರಡಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಮಕ್ಕಳ ಆರೋಗ್ಯ ವಿಚಾರಿಸಲು ಲೋಕಾಯುಕ್ತ ಎಸ್ಪಿ ಸಿದ್ದರಾಜು, ಡಿವೈಎಸ್ಪಿ ಗೀತಾ ಬೇನಳಾ ಅವರು ಆಸ್ಪತ್ರೆಗೆ ಭೇಟಿ ನೀಡಿದಾಗ ದಾಖಲಾತಿ ಪುಸ್ತಕದಲ್ಲಿ ಹಾಡುಗಳನ್ನು ಬರೆದಿರುವುದು ಬೆಳಕಿಗೆ ಬಂದಿದೆ.

ಎರಡು ಕನಸು ಸಿನಿಮಾದ ಪೂಜಿಸಲೆಂದೇ ಹೂಗಳ ತಂದೆ ದರುಶನ ಕೋರಿ ನಿಂದೆ.. ಶ್ರೀ ರೇಣುಕಾದೇವಿ ದೇವ್ಯಷ್ಟೋತ್ತರ ಸೇರಿ 15ಕ್ಕೂ ಹೆಚ್ಚು ಹಾಡುಗಳನ್ನು ದಾಖಲಾತಿ ಪುಸ್ತಕದಲ್ಲಿ ಸಿಬ್ಬಂದಿಗಳು ಬರೆದಿದ್ದಾರೆ.
ಇದನ್ನು ಗಮನಿಸಿದ ಲೋಕಾಯುಕ್ತ ಎಸ್ಪಿ ಸಿದ್ದರಾಜು ಗರಂ ಆಗಿದ್ದಾರೆ. ಆಸ್ಪತ್ರೆಯ ಅವ್ಯವಸ್ಥೆಗೊಂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಮಾಜಿ ಸಿಎಂ ಧರ್ಮಸಿಂಗ್ ಕೇತ್ರದ ಆಸ್ಪತ್ರೆನಾ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೇ ಆಸ್ಪತ್ರೆಯ ದುಸ್ಥಿ ಕಂಡು ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.


