ಬೆಂಗಳೂರು: ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ನ್ಯಾ. ಗಜಾನನ ಭಟ್ ಭಟ್ ಅವರಿದ್ದ ಪೀಠ ಪ್ರಜ್ವಲ್ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್ ರೇವಣ್ಣ ಕೂಡ ಕೋರ್ಟ್ ಹಾಲ್‌ನಲ್ಲಿ ಹಾಜರಿದ್ದರು. ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದೆ. ಕೋರ್ಟ್ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್ ರೇವಣ್ಣ ಕಣ್ಣಿರಿಟ್ಟಿದ್ದಾರೆ.
ಈ ಪ್ರಕರಣದ ಕೊನೆಯ ವಿಚಾರಣೆ ಜುಲೈ 30 ರಂದು ನಡೆದಿತ್ತು . ಸರ್ಕಾರಿ ಪರ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಹಾಜರಾಗಿದ್ದರು.
ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಇದೀಗ ಒಂದು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಸಾಬೀತಾಗಿದೆ. ನಾಳೆ ಶಿಕ್ಷೆ ಮತ್ತು ದಂಡದ ಪ್ರಮಾಣ ಪ್ರಕಟಿಸಲಿರುವ ಕೋರ್ಟ್
ನಾಳೆಯ ಶಿಕ್ಷೆ ಪ್ರಮಾಣ ನೋಡಿಕೊಂಡು ಮೇಲ್ಮನವಿ ಸಾಧ್ಯತೆ.