Tuesday, January 27, 2026
26.9 C
Bengaluru
Google search engine
LIVE
ಮನೆ#Exclusive Newsರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ ಮಾಡುತ್ತಿದ್ದೀರಿ..? ; ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ ಮಾಡುತ್ತಿದ್ದೀರಿ..? ; ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ : ರಾಜ್ಯದಲ್ಲಿ ಗರ್ಭಿಣಿಯರ ಸರಣಿ ಸಾವಿನ ಪ್ರಕರಣಗಳ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿಲ್ಲ ಯಾಕೆ? ಯಾಕೆ ಅಷ್ಟು ಜನ ತಾಯಂದಿರು, ನವಜಾತ ಶಿಶುಗಳು ಬಲಿಯಾದದ್ದು? ಇಲ್ಲಿಯೂ 40% ಕಮಿಷನ್ ಎನ್ನುವ ಮಾತು ಕೇಳಿ ಬರುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ ಮಾಡುತ್ತಿದ್ದೀರಿ? ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.ನಕಲಿ ಗಾಂಧಿಗಳ ಪಕ್ಷ ಈಗ ಬೆಳಗಾವಿಯಲ್ಲಿ ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ  ಲೇವಡಿ ಮಾಡಿದರು.

ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಅತ್ಯಾಚಾರ, ದರೋಡೆಗಳು ನಡೆಯುತ್ತಿವೆ. ಅಪರಾಧಿ ಚಟುವಟಿಕೆಗಳು ಮಿತಿ ಮೀರಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟು ಜನರಿಗೆ ಭದ್ರತೆ ಇಲ್ಲದಾಗಿದೆ ಎಂದು ಆರೋಪಿಸಿದರು.

ಸರ್ಕಾರದಲ್ಲಿ ಒಬ್ಬ ತಹಸಿಲ್ದಾರ್, ಉಪ ವಿಭಾಗಾಧಿಕಾರಿಯನ್ನು ನಿಯಂತ್ರಣ ಮಾಡುವುದು ಇವರಿಗೆ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ ಮೇಲೆ ನಿಯಂತ್ರಣ ಇಲ್ಲ. ಕಾಂಗ್ರೆಸ್ಸಿನವರು ಕರ್ನಾಟಕವನ್ನು ಸಂಪೂರ್ಣ ಮುಗಿಸಲಿಕ್ಕೇ ಬಂದಿದ್ದಾರೆ. ಇದೇನಾ ಗಾಂಧಿ ತತ್ವದ ಆಡಳಿತ ಸಿದ್ದರಾಮಯ್ಯನವರೇ ಎಂದು ಕೇಂದ್ರ ಸಚಿವರು ಗುಡುಗಿದರು.

 

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments