ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ 8.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಕೆಲ ದಿನಗಳ ಹಿಂದೆ ಬಿಡುಗಡೆ ಆದ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಮೊದಲ 6.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆ ಸಿನಿಮಾವನ್ನು ಹಿಂದಿ, ತೆಲುಗು, ತಮಿಳಿನಲ್ಲಿ ಬಿಡುಗಡೆ ಮಾಡಲಾಗಿತ್ತು. ‘ಮ್ಯಾಕ್ಸ್’ ಸಿನಿಮಾವನ್ನು ಕನ್ನಡ, ತಮಿಳು ಮತ್ತು ತೆಲುಗು ಮೂರು ಭಾಷೆಗಳಲ್ಲಿ ಮಾತ್ರವೇ ತೆರೆಗೆ ತರಲಾಗಿದೆ. ಹಾಗಿದ್ದರೂ ಸಹ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ ಸುದೀಪ್ರ ಸಿನಿಮಾ.