Saturday, September 13, 2025
21.6 C
Bengaluru
Google search engine
LIVE
ಮನೆ#Exclusive Newsನಮ್ಮ ಕ್ಲಿನಿಕ್ ಬಗ್ಗೆ ನಿಮಗೆಷ್ಟು ಗೊತ್ತು?

ನಮ್ಮ ಕ್ಲಿನಿಕ್ ಬಗ್ಗೆ ನಿಮಗೆಷ್ಟು ಗೊತ್ತು?

ಬಡತನ ರೇಖೆಗಿಂತ ಕೆಳಗಿರುವ ಜನರು, ಗುಡಿಸಲುಗಳಲ್ಲಿ ವಾಸಿಸುವ ಕಡು ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಂತೆಯೇ ಇದು ಕಾರ್ಯ ನಿರ್ವಹಿಸಲಿದೆ. ಪ್ರತಿ ವಾರ್ಡ್‌ನಲ್ಲಿ ಒಂದು ಕ್ಲಿನಿಕ್‌ ಆರಂಭವಾಗುವುದರಿಂದ ಜನರಿಗೆ ಆರೋಗ್ಯ ಹಾಗೂ ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅರಿವು ಹೆಚ್ಚಲಿದೆ.

ಸರ್ಕಾರಿ ಕಟ್ಟಡಗಳಲ್ಲಿ, ಬಾಡಿಗೆ ಕಟ್ಟಡಗಳಲ್ಲಿ 1,000-1,200 ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ ಕ್ಲಿನಿಕ್‌ ರೂಪಿಸಲಾಗುತ್ತಿದೆ. ಪ್ರತಿ ವರ್ಷ ಸಿಬ್ಬಂದಿಗಾಗಿ 138 ಕೋಟಿ ರೂ. ವೆಚ್ಚವಾಗಲಿದೆ. ನಾನ್‌ ರಿಕರಿಂಗ್‌ 17.52 ಕೋಟಿ ರೂ. ಸೇರಿ ಒಟ್ಟು 155 ಕೋಟಿ ರೂ. ವೆಚ್ಚವಾಗಲಿದೆ. ಯೋಗ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ ಮೊದಲಾದವುಗಳ ಕುರಿತು ಕ್ಲಿನಿಕ್‌ ಮೂಲಕ ಜಾಗೃತಿ ಮೂಡಿಸಲಾಗುವುದು.

ವಯೋವೃದ್ಧರ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಅರೋಗ್ಯ ತಪಾಸಣೆ ಮತ್ತು ಔಷಧಿಗಳನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುವುದು. 14 ಬಗೆಯ ಲ್ಯಾಬ್ ಟೆಸ್ಟ್​ಗಳು, ಟೆಲಿ ಕನ್ಸಲ್​ಟೇಶನ್ ಸೌಲಭ್ಯ, ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆಗಳು ಉಚಿತವಾಗಿ ದೊರೆಯುತ್ತವೆ. ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9ರಿಂದ ಸಂಜೆ 4.30ರವರೆಗೆ ನಮ್ಮ ಕ್ಲಿನಿಕ್​ಗಳು ಕಾರ್ಯನಿರ್ವಹಿಸುತ್ತವೆ. ಜನವಸತಿಗಳಿಗೆ ಹತ್ತಿರದಲ್ಲಿ ಕ್ಲಿನಿಕ್​ಗಳನ್ನು ಆರಂಭಿಸುವುದರಿಂದ ಜನರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಸಿಗಲು ಸಾಧ್ಯವಾಗುತ್ತದೆ. ಅಷ್ಟೇ ಅಲ್ಲ, ಸರ್ಕಾರಿ ಆಸ್ಪತ್ರೆಗಳ ಮೇಲಿರುವ ಒತ್ತಡವೂ ಕಡಿಮೆಯಾಗುತ್ತದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments