Thursday, May 1, 2025
30.3 C
Bengaluru
LIVE
ಮನೆUncategorizedರಾಜ್ಯದಲ್ಲಿ ಗಲಭೆ ಸೃಷ್ಟಿ ಮಾಡಲು ಕಾಂಗ್ರೆಸ್ ಕಾರಣ: ಆರ್​ ಅಶೋಕ

ರಾಜ್ಯದಲ್ಲಿ ಗಲಭೆ ಸೃಷ್ಟಿ ಮಾಡಲು ಕಾಂಗ್ರೆಸ್ ಕಾರಣ: ಆರ್​ ಅಶೋಕ

ಹುಬ್ಬಳ್ಳಿ : ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್​​ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿಯ ಶಹರ ಠಾಣೆಯ ಎದುರು ಪ್ರತಿಪಕ್ಷ ನಾಯಕ ಆರ್​ ಅಶೋಕ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ರಾಮ ಭಕ್ತರನ್ನು ಬಂಧಿಸುವ ಹುನ್ನಾರ ಕಾಂಗ್ರೆಸ್​ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ಸರ್ಕಾರದ ವಿರುದ್ಧ ಆರ್​ ಅಶೋಕ​ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಸಾವಿರಾರು ಎಲ್​ಪಿಎಸ್​​​ ಕೇಸ್​ಗಳು ಇವೆ ಆದರೆ ಅವೆಲ್ಲವನ್ನು ಬಿಟ್ಟು ಹುಬ್ಬಳ್ಳಿ ಕಡೆ ಬಂದಿರೋದು ಯಾಕೆ…? ಕರಸೇವಕರನ್ನು ಹುಡುಕಿ ಬಂಧನ ಮಾಡಿದ್ದು ನ್ಯಾಯವಾ..? ಕಾಂಗ್ರೆಸ್​​ಗೆ ಕಾನೂನು ಗೊತ್ತಿಲ್ಲ.. ಹಲವು ಬಾರಿ ಕಾಂಗ್ರೆಸ್​ ಸರ್ಕಾರ ಅಧಿಕಾರದಲ್ಲಿತ್ತು ಆಗ ಈ ಕೇಸ್​​ ಯಾಕೆ ನೆನಾಪಗಲಿಲ್ಲ ಎಂದು ಪ್ರಶ್ನಿಸಿದರು.

ಇನ್ನೂ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಗಿಮಿಕ್​ ಮಾಡುತ್ತಿದೆ ಎಂಬ ಕಾಂಗ್ರೆಸ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಆರ್​ ಅಶೋಕ್​, ಕಾಂಗ್ರೆಸ್​​ ಸೋಲುವ ಭಯದಿಂದ ಮುಸ್ಲಿಂ ಓಲೈಕೆ ಮಾಡುತ್ತಿದೆ. ಚುನಾವಣೆ ಬಂದಾಗ ಯಾವುದಾದರೂ ಒಂದು ಸಮುದಾಯ ಬೆಂಬಲ‌ ಪಡೆಯವ ದೃಷ್ಟಿಯಿಂದ ಹಿಂದೂ ಮುಸ್ಲಿಂ ನಡುವೆ ಬೆಂಕಿ‌ ಹಾಕುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ವಿಪಕ್ಷನಾಯಕ‌ ಆರ್ ಅಶೋಕ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments