ಬೆಂಗಳೂರು: ವಿಧಾನಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಅಧಿವೇಶನದಲ್ಲಿ ಹನಿಟ್ರ್ಯಾಪ್ ಪ್ರಕರಣದ ಕುರಿತಂತೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಹನಿಟ್ರ್ಯಾಪ್ ಪ್ರಕರಣ ತನಿಖೆ ಆಗಬೇಕೆಂದು ಶಾಸಕರು ಆಗ್ರಹಿಸಿದರು.
ಇನ್ನು ರಾಜ್ಯ ಸರ್ಕಾರ ಮಂಡನೆ ಮಾಡಿರುವ ಬಜೆಟ್ನಲ್ಲಿ ಮುಸ್ಲಿಂ ಮೀಸಲಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಶಾಸಕರು ಸದನ ಬಾವಿಗಿಳಿದು ಬಜೆಟ್ ಪ್ರತಿ ಹರಿದು ಸ್ಪೀಕರ್ ಮೇಲೆ ಎಸೆದು ಪ್ರತಿಭಟನೆ ನಡೆಸಿದ್ದಾರೆ. ಸದನದಲ್ಲಿ ಭಾರೀ ಗದ್ದಲ, ಕೋಲಾಹಲದ ನಡೆವೆ ಬಜೆಟ್ನ್ನು ಅಂಗೀಕಾರ ಮಾಡಲಾಗಿದೆ. ಹೈಡ್ರಾಮಾ ಮುಂದುವರಿದ ಹಿನ್ನಲೆ ಸ್ಪೀಕರ್ ಯು.ಟಿ.ಖಾದರ್ 10 ನಿಮಿಷಗಳ ಕಾಲ ಕಲಾಪವನ್ನು ಮುಂದೂಡಿದ್ದಾರೆ.