Wednesday, December 10, 2025
26.6 C
Bengaluru
Google search engine
LIVE
ಮನೆ#Exclusive NewsTop Newsಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ: ಕರಿ ಟೋಪಿ ಎಂಎಎಲ್ ಬಾರಪ್ಪ ಎಂದ ಡಿಕೆಶಿ

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ: ಕರಿ ಟೋಪಿ ಎಂಎಎಲ್ ಬಾರಪ್ಪ ಎಂದ ಡಿಕೆಶಿ

ಬೆಂಗಳೂರು: ಜೆಪಿ ಪಾರ್ಕ್​​​​​​​​​​​​​ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​​ ಅವರ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ವೇದಿಕೆ ಕಾರ್ಯಕ್ರಮದಲ್ಲಿ ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

ಇಂದು ಮತ್ತಿಕೆರೆ ಬಳಿಯ ಜೆಪಿ ಪಾರ್ಕ್​​ನಲ್ಲಿ ಡಿಕೆಶಿ ವಾಕಿಂಗ್ ಮಾಡ್ತಾ ಜನರ ಜೊತೆ ಸಂವಾದ ನಡೆಸಿದ್ರು. ಇದೇ ವೇಳೆ RSS ಗಣವೇಷಧಾರಿಯಾಗಿ ಶಾಸಕ ಮುನಿರತ್ನ ಎಂಟ್ರಿ ಕೊಟ್ಟಿದ್ದಾರೆ. ಈ ವೇಳೆ ಮುನಿರತ್ನ ಅವರನ್ನು ಕಂಡು ಡಿಸಿಎಂ ವೇದಿಕೆ ಮೇಲಕ್ಕೆ ಕರೆದಿದ್ದಾರೆ.

ಕರಿ ಟೋಪಿ ಎಂಎಎಲ್ ಬಾರಪ್ಪ ಎಂದು ಮುನಿರತ್ನ ಅವರನ್ನ ವೇದಿಕೆಗೆ ಡಿಕೆ ಶಿವಕುಮಾರ್​ ಅವರು ಆಹ್ವಾನಿಸಿದರು. ಆಹ್ವಾನಿಸಿದ ಹಿನ್ನೆಲೆಯಲ್ಲಿ ಮುನಿರತ್ನ ವೇದಿಕೆಗೆ ಹೋಗಿ ಡಿಕೆಶಿ ಬಳಿ ಮೈಕ್‌ ಕೇಳಿದರು. ಆದರೆ ಡಿಕೆಶಿ ಮೈಕ್‌ ನೀಡದೇ ಇಲ್ಲಿ ಕುಳಿತುಕೊಳ್ಳಿ ಎಂದರು. ಇದಕ್ಕೆ ಒಪ್ಪದ ಮುನಿರತ್ನ ಮೈಕ್‌ ನೀಡುವಂತೆ ಕೇಳಿದರು. ಕೊನೆಗೆ ಮುನಿರತ್ನ ಅವರು ಮೈಕ್‌ ಪಡೆದು, ಆರ್‌ಎಸ್‌ಎಸ್‌ ಪಥಸಂಚಲನ ಮುಗಿಸಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೇನೆ. ನನಗೆ ಈ ಕಾರ್ಯಕ್ರಮಕ್ಕೆ ಯಾವುದೇ ಆಹ್ವಾನ ಇಲ್ಲ. ಆದರೆ ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಕಾರಣ ನಾನೊಬ್ಬ ಪ್ರಜೆಯಾಗಿ ಭಾಗವಹಿಸಿದ್ದೇನೆ ಎಂದು ಹೇಳಿ ವೇದಿಕೆಯಿಂದ ಇಳಿದು ಮತ್ತೆ ಜನರ ಮಧ್ಯೆ ಕುಳಿತರು.

ಸಭಾ ಕಾರ್ಯಕ್ರಮದಲ್ಲಿ ನಿರೂಪಕರು ಮುನಿರತ್ನ ಅವರನ್ನು ಸ್ವಾಗಿಸಿ ವೇದಿಕೆಗೆ ಆಹ್ವಾನಿಸಿದರು. ಈ ವೇಳೆ ವೇದಿಕೆ ಏರಿದ ಮುನಿರತ್ನ, ನಾನೊಬ್ಬ ಜನಪ್ರತಿನಿಧಿಯಾಗಿದ್ದೇನೆ ನನಗೆ ಆಹ್ವಾನ ಇಲ್ಲ. ಈ ಕ್ಷೇತ್ರದ ಸಂಸದರಿಗೂ ಆಹ್ವಾನ ಇಲ್ಲ. ಇದು ಸರ್ಕಾರಿ ಕಾರ್ಯಕ್ರಮವೇ ಅಥವಾ ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮವೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿ ಅಸಮಾಧಾನ ಹೊರಹಾಕಿದರು. ಮುನಿರತ್ನ ಆಕ್ರೋಶ ಹೊರ ಹಾಕುತ್ತಿದ್ದಂತೆ ಅಧಿಕಾರಿಗಳು ಮತ್ತು ಪೊಲೀಸರು ಮುನಿರತ್ನ ಅವರನ್ನು ಸುತ್ತುವರೆದು ಮೈಕ್‌ ಪಡೆದುಕೊಂಡರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments