ರಾಜ್ಯ

ಸಾಂಬರ್ ವಿಷಯಕ್ಕೆ ಫೈಟ್ – ಹೆಂಡ್ತಿ ಸೂಸೈಡ್..!

ದಂಪತಿ ನಡುವೆ ಸಾಂಬಾರ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಅದು ಪತ್ನಿ ಸಾವಿನಲ್ಲಿ ಕೊನೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ಸಾಂಬಾರ್​ ವಿಚಾರಕ್ಕೆ ನಡೆದ ಜಗಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಆದ್ರೆ ಮಹಿಳೆ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಆರೋಪ ಮಾಡಿದ್ದಾರೆ..

ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಕಲಹ ಶುರುವಾಗಿತ್ತಂತೆ. ಕ್ಷುಲ್ಲಕ ವಿಚಾರಕ್ಕೆ ಶುರುವಾದ ಕಲಹದಿಂದ ಮಹಿಳೆ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗ್ತಿದೆ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ..

ದೇವನಹಳ್ಳಿ ತಾಲೂಕಿನ ಸಾವನಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು. 38 ವರ್ಷದ ನಾಗರತ್ನ ಮೃತ ಮಹಿಳೆ. ಮಗಳದ್ದು ಆತ್ಮಹತ್ಯೆಯಲ್ಲ‌ ಕೊಲೆ ಅಂತ ಮಹಿಳೆಯ ಸಂಬಂಧಿಕರು ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡನೇ ಕೊಲೆ ಮಾಡಿದ್ದಾನೆ ಎಂದು ಮೃತಳ ಅಣ್ಣ ಮತ್ತು ತಾಯಿ ಆರೋಪ ಮಾಡಿದ್ದಾರೆ. ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ..

Comments (0)

Your email address will not be published. Required fields are marked *

Back to top button