Freedom TV

ಹೆಲಿಕಾಪ್ಟರ್​ ಪತನ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಮಳೆಯ ನಡುವೆ ಶನಿವಾರ ಹೆಲಿಕಾಪ್ಟರ್ ಪತನವಾಗಿದ್ದು, ಪೈಲಟ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಹೆಲಿಕಾಪ್ಟರ್ ಮುಂಬೈನಿಂದ ಹೈದರಾಬಾದ್‌ಗೆ ಹೋಗುತ್ತಿತ್ತು.

ಪ್ರಾಥಮಿಕ ವರದಿಗಳ ಪ್ರಕಾರ, ಎಲ್ಲಾ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಹೆಲಿಕಾಪ್ಟರ್ ಮುಂಬೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಪುಣೆ ಜಿಲ್ಲೆಯ ಪೌಡ್ ಗ್ರಾಮದ ಬಳಿ ಅಪಘಾತಕ್ಕೀಡಾಗಿದ್ದು ಹೆಲಿಕಾಪ್ಟರ್‌ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು.

ಪುಣೆ ಗ್ರಾಮಾಂತರ ಪೊಲೀಸ್ ಎಸ್ಪಿ ಪಂಕಜ್ ದೇಶಮುಖ್ ಮಾತನಾಡಿ, ಪೈಲಟ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದರು.

Comments (0)

Your email address will not be published. Required fields are marked *

Back to top button