#Exclusive NewsTop Newsಉದ್ಯೋಗದೇಶ/ವಿದೇಶರಾಜಕೀಯವಿಶೇಷಸುದ್ದಿ

ಉದ್ಯಮ ಕೆಲವೇ ವ್ಯಕ್ತಿಗಳ ಹಿಡಿತದಲ್ಲಿರೋದನ್ನು ವಿರೋಧಿಸುತ್ತೇನೆ : ರಾಹುಲ್ ಗಾಂಧಿ

ನವದೆಹಲಿ: ತನ್ನನ್ನು ಬಿಸಿನೆಸ್ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಆದರೆ, ತಾನು ಬಿಸಿನೆಸ್ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಬಿಸಿನೆಸ್ ಏಕಸ್ವಾಮ್ಯದ ವಿರೋಧಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಕೆಲವೇ ಉದ್ಯಮಿಗಳನ್ನು ಪ್ರೋತ್ಸಾಹಿಸುತ್ತದೆ ಎಂಬುದು ರಾಹುಲ್ ಗಾಂಧಿ ಸದಾ ಮಾಡುತ್ತಿರುವ ಆರೋಪ. ಆದರೆ, ಗೌತಮ್ ಅದಾನಿ, ಮುಕೇಶ್ ಅಂಬಾನಿ ಅವರತ್ತ ರಾಹುಲ್ ಆಗಾಗ್ಗೆ ಬೊಟ್ಟು ಮಾಡುತ್ತಲೇ ಇರುತ್ತಾರೆ. ಸಂಪತ್ತು ಮರುಹಂಚಿಕೆ ಬಗ್ಗೆ ಮಾತನಾಡುತ್ತಿರುತ್ತಾರೆ. ಅಂತೆಯೇ, ರಾಹುಲ್ ಗಾಂಧಿ ಉದ್ಯಮ ಮತ್ತು ಉದ್ಯಮಿಗಳ ವಿರೋಧಿ ಎನ್ನುವಂತಹ ಟೀಕೆಗಳೂ ಸಾಕಷ್ಟು ಕೇಳಿಬರುತ್ತಲೇ ಇವೆ. ಈ ಕಾರಣಕ್ಕೆ ರಾಹುಲ್ ಗಾಂಧಿ ನಿನ್ನೆ ವಿಡಿಯೋ ಸಂದೇಶವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದು, ತಾನು ಬಿಸಿನೆಸ್ ವಿರೋಧಿ ಅಲ್ಲ ಎಂದು ಸ್ಪಷ್ಟಪಡಿಸುವ ಪ್ರಯತ್ನ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button