ಬೆಳಗಾವಿ: ವೋಟ್ ಚೋರಿ ಅಭಿಯಾನಕ್ಕಾಗಿ ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, 2023 ರಲ್ಲಿಯೇ ಕರ್ನಾಟಕದಲ್ಲಿ ಈ ಅಭಿಯಾನ ಆರಂಭಿಸಿದ್ದರು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ಧಾರೆ..
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷದ ಸಾಧನವಾಗಿ ಮಾರ್ಪಟ್ಟಿರುವ ಚುನಾವಣಾ ಆಯೋಗದ ವಿರುದ್ಧ ನಾವು ಹೋರಾಡುತ್ತಿದ್ದೇವೆ. ಇದನ್ನೇ ನಾವು ಬಹಿರಂಗಪಡಿಸಲು ಬಯಸುತ್ತೇವೆ ಮತ್ತು ಅದಕ್ಕಾಗಿ ನಾವು ದೆಹಲಿಗೆ ಹೋಗುತ್ತಿದ್ದೇವೆ. ನಾವು ಕರ್ನಾಟಕದಿಂದ 1.42 ಕೋಟಿಗೂ ಹೆಚ್ಚು ಸಹಿಗಳನ್ನು ಸಂಗ್ರಹಿಸಿದ್ದೇವೆ ಎಂದು ಹೇಳಿದರು. ಯತೀಂದ್ರ ಸಿದ್ದರಾಮಯ್ಯ ಅವರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಅದೆಲ್ಲದಕ್ಕೂ ಸಿಎಂ ಉತ್ತರಿಸುತ್ತಾರೆ ಎಂದರು.


