ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್​ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕೆಲ ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಘಟನೆಯಲ್ಲಿ ಅತುಲ್ ಸಂತ್ರಸ್ತ ಅಲ್ಲ. ನಾನೇ ನಿಜವಾದ ಸಂತ್ರಸ್ತೆ ಎಂದು ನಿಖಿತಾ ಪೊಲೀಸರ ಮುಂದೆ ತನ್ನ ಅಳಲು ತೋಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ನನ್ನ ಪತಿ ಅತುಲ್ ಸಂತ್ರಸ್ತ ಅಲ್ಲ. ನಿಜವಾದ ಸಂತ್ರಸ್ತೆ ನಾನು. ಅಡುಗೆ ಚೆನ್ನಾಗಿ ಮಾಡಿಲ್ಲ ಎಂದು ಕಿರುಕುಳ ನೀಡುತ್ತಿದ್ದ.ನಾನ್ ವೆಜ್ ಮಾಡದಿದ್ದರೂ ಇವರು ಮಾಡಿ ಎಂದು ಒತ್ತಾಯಿಸುತ್ತಿದ್ದರು. ಇಷ್ಟೆಲ್ಲಾ ಅದರೂ ನಾನು ಮನೆ ಬಿಟ್ಟು ಹೋಗಿರಲಿಲ್ಲ. ಮನೆ ಬಿಟ್ಟು ಹೋಗುವಂತೆ ಮಾಡಿದ್ದು ಸಹ ಅತುಲ್ ಹೊರತು ನಾನಾಗಿಯೇ ಹೋಗಿಲ್ಲ ಎಂದು ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ.

ನಾನು ಮತ್ತು ಅತುಲ್ ಬೇರೆ ಬೇರೆ ಕಡೆ ವಾಸ ಮಾಡುತ್ತಿದ್ದೇವೆ . ಆತ ಮಾಡಿರುವ ಆರೋಪ ಸುಳ್ಳು, ಎಲ್ಲವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ. 2020 ರಿಂದಲೂ ನಾವು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದೇವೆ. ಆತನ ಸಾವಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನನ್ನ ಯಾಕೆ ನೀವು ಬಂಧಿಸಿದ್ದೀರಿ ಎಂದು ಗೊತ್ತಿಲ್ಲ, ಕಾನೂನಾತ್ಮಕವಾಗಿ ಎಲ್ಲವನ್ನೂ ನೋಡಿಕೊಳ್ಳುತ್ತೇನೆ ಎಂದು ನಿಖಿತಾ, ಪೊಲೀಸರು ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

Verified by MonsterInsights