ಬೆಂಗಳೂರು : ಡಿ.ಕೆ. ಶಿವಕುಮಾರ್ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕೆ ಶ್ರೀರಾಮುಲು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಟೀಕಿಸಿದ್ದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ತಮ್ಮ ಮೇಲಿನ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದು, ನಾನು ಶ್ರೀರಾಮುಲು ಅವರಿಗೆ ಈಗ ಯಾವುದೇ ಆಹ್ವಾನ ನೀಡಿಲ್ಲ ಎಂದಿದ್ದಾರೆ.
ಈ ಹಿಂದೆ ಚುನಾವಣೆಗೆ ಮುಂಚಿತವಾಗಿ ಶ್ರೀರಾಮುಲು ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದು ನಿಜ. ಆಗ ಅವರು ಬರುವುದಿಲ್ಲ, ಬಿಜೆಪಿಯಲ್ಲಿಯೇ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು. ನಾನು ಆ ರೀತಿ ಸುಮಾರು 50 ಜನಕ್ಕೆ ಕೇಳಿದ್ದೇನೆ ಎಂದು ಹೇಳಿದರು. ಶ್ರೀರಾಮುಲು ಅವರು ಈಗ ಕಾಂಗ್ರೆಸ್ ಪಕ್ಷಕ್ಕೆ ಬರಲು ಒಪ್ಪಿದರೆ ಎಂದು ಪ್ರಶ್ನಿಸಿದಾಗ, ಇದರ ಬಗ್ಗೆ ನಾನೇಕೆ ಸುಮ್ಮನೆ ಯೋಚನೆ ಮಾಡಲಿ ಎಂದರು.