ಬೆಂಗಳೂರು: ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ನಾನು ಹೆದರುವುದಿಲ್ಲ ಎಂದು ಸ್ಯಾಂಡಲ್‌ವುಡ್ ನಟ ಯುವ ಪತ್ನಿ ಶ್ರೀದೇವಿ ಭೈರಪ್ಪ ಹೇಳಿದ್ದಾರೆ.
ಈ ಸಂಬಂಧ ಇನ್‌ಸ್ಟಾದಲ್ಲಿ ಸ್ಟೋರಿ ಹಾಕಿರುವ ಅವರು, ಹಾರ್ವರ್ಡ್‌ನಲ್ಲಿ ನಾನೊಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರಿಸಲು ನಾನು ಅಮೆರಿಕಗೆ ಹಿಂತಿರುಗುತ್ತಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂದಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ.
ಸ್ಟೋರಿಯಲ್ಲಿ ಏನಿದೆ?
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com