Wednesday, April 30, 2025
30.3 C
Bengaluru
LIVE
ಮನೆರಾಜಕೀಯಈಶ್ವರಪ್ಪ ಫೇಕ್ ಸುದ್ಧಿಗೂ ನನಗೂ ಸಂಬಂಧವಿಲ್ಲ

ಈಶ್ವರಪ್ಪ ಫೇಕ್ ಸುದ್ಧಿಗೂ ನನಗೂ ಸಂಬಂಧವಿಲ್ಲ

ಶಿವಮೊಗ್ಗ : ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸುವ ವಿಶ್ವಾಸವಿದೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಕಾರಣಕರ್ತರಾದ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅನೇಕ ವಿಶೇಷತೆಗಳಿಂದ ಕೂಡಿತ್ತು. ವಿಕಸಿತ ಭಾರತಕ್ಕೋಸ್ಕರ ಮತದಾನ ಮಾಡಿದ ಮತದಾರರಿಗೆ ಧನ್ಯಾದಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ಒಂದು ದಶಕದಿಂದ ಇಡೀ ವಿಶ್ವವೇ ಬೆರಗಾಗುವಂತೆ ದೇಶಕ್ಕೆ ಶಕ್ತಿಯುತ ಹಾಗೂ ಅಭಿವೃದ್ಧಿ ಮಾಡಿ ವಿಶ್ವಕೇಂದ್ರವನ್ನಾಗಿ ಮಾಡಲು ಮತ್ತೊಮ್ಮೆ ಮೋದಿ ಸರ್ಕಾರ ಘೋಷಣೆಯಡಿ ಸಹಕಾರ ನೀಡಲು ಕೈ ಜೋಡಿಸಿದ್ದಕ್ಕಾಗಿ ಮತ್ತೊಮ್ಮೆ ಮತದಾರರಿಗೆ ಕೃತಜ್ಞತೆಗಳು ಎಂದಿದ್ದಾರೆ.

1952ರಿಂದ 2024ರವರೆಗೆ ಒಟ್ಟು 18 ಬಾರಿ ಲೋಕಸಭೆ ಚುನಾವಣೆಗಳು ನಡೆದಿದ್ದು 1952ರಲ್ಲಿ ಶೇ. 75.14 ರಷ್ಟು ಮತದಾನವಾಗಿದ್ದನ್ನು ಬಿಟ್ಟರೆ 2024ರ ಚುನಾವಣೆಯಲ್ಲಿ ಶೇ. 78.31ರಷ್ಟು ಮತದಾನವಾಗಿರುವುದು ದಾಖಲೆಯಾಗಿದೆ ಎಂದಿದ್ದಾರೆ.

ಈಶ್ವರಪ್ಪನವರು ನೆನ್ನೆ ನನ್ನ ಬಗ್ಗೆ ದೂರು ನೀಡಿದ ವಿಷಯ ತಿಳಿಯಿತು. ನಾನು ಆಗ ಆನಂದಪುರದಲ್ಲಿದ್ದೆ ನನಗೆ ಆಶ್ಚರ್ಯವಾಯಿತು. ಇದನ್ನು ನಾನು ಕೂಡಲೇ ಪರಿಶೀಲನೆ ಮಾಡಿದೆ, ಇದು ಸುಳ್ಳು ಸುದ್ಧಿಯಾಗಿದ್ದು, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇದು ನಿರಾಧರವಾದ ಆರೋಪವಾಗಿದೆ ಎಂದರು. ಒಟ್ಟಾರೆಯಾಗಿ ನನಗೆ ಬಂದ ಮಾಹಿತಿ ಪ್ರಕಾರ ಕಳೆದ ಬಾರಿಗಿಂತ ಹೆಚ್ಚಿನ ಮತದ ಅಂತರದಿಂದ ಶಿವಮೊಗ್ಗದಲ್ಲಿ ಗೆಲ್ಲತ್ತೇನೆ ಎಂದಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments