ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಬಿಜೆಪಿಯಲ್ಲೇ ಪರ-ವಿರೋಧದ ಮಾತುಗಳು ಕೇಳಿ ಬರುತ್ತಿದೆ. ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ. ಸೋಮಣ್ಣ ಅವರ ಹೆಸರು ಸಹ ಕೇಳಿ ಬರುತ್ತಿದೆ.
ಇನ್ನು ಈ ಬಗ್ಗೆ ಮಾತನಾಡಿದ ವಿ. ಸೋಮಣ್ಣ ಎರಡು ಕಡೆ ಸೋತವನಿಗೆ ಮೂರನೇ ಕಡೆ ಟಿಕೆಟ್ ನೀಡಿದ್ರು. ತುಮಕೂರಿನ ಜನ ನನ್ನ ಕೈ ಹಿಡಿದ್ರು, ಕೇಂದ್ರದಲ್ಲಿ ಮಂತ್ರಿಯಾಗಿದ್ದೇನೆ. ಜನರ ವಿಶ್ವಾಸಕ್ಕೆ ಋಣಿಯಾಗಿರುತ್ತೇನೆ ಎಂದು ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಲೇ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಮೊದಲು ನಾನು ಎಂಬುದನ್ನು ಬಿಡಬೇಕು ಎಲ್ಲರಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು. ಪ್ರಧಾನಿ ಅವ್ರು ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಮಾಹಿತಿ ಇಲ್ಲ. ಅಂತಹ ಸಂದರ್ಭ ಬಂದಾಗ ಹೈಕಮಾಂಡ್ಗೆ ಯಾರಿಗೆ ಯಾವ ಸ್ಥಾನ ನೀಡಬೇಕು ಎಂಬುದು ತಿಳಿದಿದೆ ಎಂದು ಹೇಳಿದ್ರು.
ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಈ ಬಗ್ಗೆ ಯಾವ ಶಾಸಕರು ನನ್ನ ಪರವಾಗಿ ಮಾತನಾಡಿದ್ದಾರೋ ಅವರಿಗೆಲ್ಲಾ ನಾನು ಆಭಾರಿ ಆಗಿರುತ್ತೇನೆ. ಪಕ್ಷದಲ್ಲಿ ಎಷ್ಟು ಬಣ ಇದೆಯೋ ಗೊತ್ತಿಲ್ಲ,
ಇಲ್ಲಿ ಒಳ್ಳೆಯತನಕ್ಕೆ ಮಾತ್ರ ಬೆಲೆ ಸಿಗೋದು. ಯಾರೇ ಆದ್ರೂ ಸರಿ ನಾನು ಎಂಬುದನ್ನು ಮೊದಲು ಬಿಡಬೇಕು.
ಇಲ್ಲಿ ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ ಎನ್ನುವ ಮೂಲಕ ವಿಜಯೇಂದ್ರ ವಿರುದ್ಧ ಸೋಮಣ್ಣ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.