Top Newsರಾಜ್ಯ

 RCB ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: ಮುಖ್ಯಮಂತ್ರಿ

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು.

ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ರು..

ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಅಂದ್ರು.

Comments (0)

Your email address will not be published. Required fields are marked *

Back to top button