ಮೈಸೂರು : ನಾಯಕತ್ವ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಪರವಾಗಿ ನಾನು ನೀಡಿದ ಹೇಳಿಗೆಗೆ ಈಗಲೂ ಬದ್ದನಾಗಿದ್ಧೇನೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ..
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ ಆದರೆ ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಹೇಳಿದರು.
ನನ್ನ ಹೇಳಿಕೆಯಲ್ಲಿ ತಪ್ಪೇನಿಲ್ಲ. ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದರು. ನವೆಂಬರ್ ಕ್ರಾಂತಿಯೂ ಇಲ್ಲ, ಡಿಸೆಂಬರ್ ಕ್ರಾಂತಿ, ಯಾವ ಕ್ರಾಂತಿಯೂ ಇಲ್ಲ. 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ಪಕ್ಷದಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಪಕ್ಷ ನೋಟಿಸ್ ಕೊಟ್ಟರೆ ನಾನು ಉತ್ತರ ಕೊಡುತ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.


