Freedom TVರಾಜಕೀಯ

ಈ ಪ್ರೀತಿಗಾಗಿ ನಾನು ನನ್ನ ಜನರಿಗೆ ಧನ್ಯವಾದ ಹೇಳುತ್ತೇನೆ – ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಮೇ 04  ಎನ್​ಡಿಎ 291 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಇಂಡಿಯಾ ಒಕ್ಕೂಟ​ 234 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಲೆಕ್ಕಾಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ನನ್ನ ಜನರಿಗೆ ಧನ್ಯವಾದ ಹೇಳುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ ಎಂದು ಮೋದಿ ತಮ್ಮ ಪೋಸ್ಟ್​ನಲ್ಲಿ ಬರೆದಿದ್ದಾರೆ.

ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕೆ ನಾನು ಧನ್ಯವಾದ ಹೇಳುವೆ. ಅವರ ಅಸಾಧಾರಣ ಪ್ರಯತ್ನಗಳಿಗೆ ಪದಗಳು ಎಂದಿಗೂ ನ್ಯಾಯ ಸಲ್ಲಿಸುವುದಿಲ್ಲ ಎಂದು ಮೋದಿ ಬರೆದಿದ್ದಾರೆ.

Comments (0)

Your email address will not be published. Required fields are marked *

Back to top button