Top Newsಸುದ್ದಿ

ನನ್ನನ್ನು ಬಂಧಿಸಿಲ್ಲ, ಕೇವಲ ವಿಚಾರಣೆ ನಡೆಸಲಾಗಿದೆ; ಸ್ನೇಹಮಯಿ ಕೃಷ್ಣ ಸ್ಪಷ್ಟನೆ!

ಸಿಸಿಬಿ ಪೊಲೀಸರ ವಿಚಾರಣೆಯ ಬಳಿಕ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮನ್ನು ಬಂಧಿಸಲಾಗಿದೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ ಆಯುಕ್ತ ಡಿ.ವಿ. ನಟೇಶ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೇವಲ ವಿಚಾರಣೆಗಾಗಿ ಕರೆತರಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.

ಡಿ.ವಿ. ನಟೇಶ್ ಸ್ನೇಹಮಯಿ ಕೃಷ್ಣ ವಿರುದ್ಧ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸ್ನೇಹಮಯಿ ಕೃಷ್ಣ ಅವರು ನಕಲಿ ಆಡಿಯೋ ಸೃಷ್ಟಿಸಿ ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದಾರೆ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂಬುದು ದೂರಿನ ಸಾರಾಂಶವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಕೃಷ್ಣ, “ಆಡಿಯೋ ಅಸಲಿ ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು. ನಟೇಶ್ ಹಾಗೂ ವಿನೋದ್ ನಡುವಿನ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ನಟೇಶ್ ಈ ರೀತಿ ದೂರು ನೀಡಿದ್ದಾರೆ. ಈ ಪ್ರಕರಣಕ್ಕೂ ಮುಡಾ ಹಗರಣಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ತಿಳಿಸಿದ್ದಾರೆ.

ಈ ಬೆಳವಣಿಗೆಯು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಸ್ನೇಹಮಯಿ ಕೃಷ್ಣ ಅವರು ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button