ಯಾದಗಿರಿ ; ಸರಳ ಸಜ್ಜನಿಕೆಯ ಸತೀಶಣ್ಣ ಸಿಎಂ ಆದರೆ ಸ್ವಾಗತಿಸುತ್ತೇನೆ ಎಂದು ಜೆಡಿಎಸ್ ರಾಜ್ಯ ಯುವ ಮುಖಂಡ ಹಾಗೂ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗುರುಮಿಠಕಲ್ ಮತಕ್ಷೇತ್ರದ ಸೈದಾಪುರ ಕ್ರಾಸ್ ಬಳಿ ಸೋಮವಾರ ಭಗವಾನ್ ಮಹರ್ಷಿ ವಾಲ್ಮೀಕಿ ವೃತ್ತ ಅನಾವರಣಕ್ಕೆ ಆಗಮಿಸಿದ್ದ ಸಚಿವ ಸತೀಶ ಜಾರಕಿಹೊಳಿ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಶಾಸಕ, ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಿಸಿದಾಗ ಕರತಾಡನಗಳು ಮುಗಿಲು ಮುಟ್ಟಿದ್ದವು.

ಸತೀಶಣ್ಣ ಮುಂದಿನ ಸಿಎಂ ಆಗಬೇಕು, 2028-29ನೇ ಸಾಲಿನ ಒಳಗೆ, ಅಂದರೆ ಮುಂದಿನ ವಿಧಾನಸಭೆ ಚುನಾವಣೆಯೊಳಗೆ ಸಿಎಂ ಆಗಬೇಕು. ಸತೀಶ್ ಅಣ್ಣ ಸರಳ ವ್ಯಕ್ತಿತ್ವ ಹೊಂದಿದ್ದಾರೆ. ಉತ್ತಮ ವ್ಯಕ್ತಿತ್ವ ಇರುವ ಜನಪರ ನಾಯಕರಾಗಿದ್ದು, ಇಂತಹ ವ್ಯಕ್ತಿತ್ವ ಹೊಂದಿರುವ ನಾಯಕ ಉನ್ನತ ಸ್ಥಾನಕ್ಕೆ ಅರ್ಹರು. ಸತೀಶ ಜಾರಕಿಹೊಳಿ ಅವರು ಸಿಎಂ ಆದರೆ ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *

Verified by MonsterInsights