ತುಮಕೂರು: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ.ಎನ್ ರಾಜಣ್ಣ ಕಾಂಗ್ರೆಸ್ ಪಕ್ಷದ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.. ಯಾವ ಪಕ್ಷದ ಬಾವುಟ ಹಿಡಿಬೇಕು ಎನ್ನುವುದನ್ನು ನಾನು ಮುಂದಿನ ದಿನದಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.. ಇದು ಚರ್ಚೆಗೆ ಗ್ರಾಸವಾಗಿದೆ..
ನಾನು ಮಧುಗಿರಿ ಕ್ಷೇತ್ರಕ್ಕೆ ಬಂದಾಗ ಕಾರ್ಯಕರ್ತರು ಕಾಂಗ್ರೆಸ್ ಬಾವುಟ ಹಿಡಿದು ರ‍್ಯಾಲಿ ಮಾಡುತಿದ್ದರು. ಇವತ್ತಿನ ರ‍್ಯಾಲಿಯಲ್ಲಿ ಯಾರೂ ಕಾಂಗ್ರೆಸ್ ಬಾವುಟ ಹಿಡಿಯಲೇ ಇಲ್ಲ. ಅವರಿಗೂ ಕಾಂಗ್ರೆಸ್ ಪಕ್ಷದ ಮೇಲೆ ಬೇಸರ ತರಿಸಿದಂತಿದೆ. ಮುಂದಿನ ದಿನದಲ್ಲಿ ಯಾವ ಬಾವುಟ ಹಿಡಿಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ ಎಂದರು.
2004ರಲ್ಲಿ ತಾವು ದೊಡ್ಡೇರಿ ಹೋಬಳಿಯಿಂದ ಶಾಸಕರಾಗಿದ್ದ ಸಂದರ್ಭವನ್ನು ನೆನಪಿಸಿಕೊಂಡ ರಾಜಣ್ಣ, ಆಗ ಕಾಂಗ್ರೆಸ್ ಪಕ್ಷದಲ್ಲಿ ಸರಿಯಾದ ಗೌರವ ಸಿಗದ ಕಾರಣ ಜನತಾದಳಕ್ಕೆ ಸೇರಿ ಸ್ಪರ್ಧಿಸಿದ್ದೆ. ಆಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್ವಾಶ್ ಆಗಿತ್ತು ಎಂದ ಅವರು, ಇದೇ ಪರಿಸ್ಥಿತಿ ಈಗ ಮತ್ತೆ ಬರುತ್ತದೆಯೋ ಏನೋ ಗೊತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ..


