#Exclusive NewsTop Newsಫ್ರೀಡಂ ಟಿವಿ ವಿಶೇಷರಾಜಕೀಯರಾಜ್ಯವಿಶೇಷಸುದ್ದಿ

ಜಾತಿ ಗಣತಿ ಜಾರಿಗೆ ತರುತ್ತೇನೆ-ಸಿಎಂ

ಮೈಸೂರು:ಕರ್ನಾಟಕ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಈಗಾಗಲೇ ಕೆಎಸ್‌ಸಿಬಿಸಿ ಅಧ್ಯಕ್ಷರಾಗಿದ್ದ ಕೆ.ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.  ವರದಿಯು ಈ ಎರಡೂ ದೊಡ್ಡ ಸಮುದಾಯಗಳ ನಡುವೆ ಕೋಲಾಹಲವನ್ನು ಸೃಷ್ಟಿಸಿದೆ. ಸಮೀಕ್ಷೆಯು ಲಿಂಗಾಯತ ಜನಸಂಖ್ಯೆಯನ್ನು ಕೇವಲ 65 ಲಕ್ಷ (10.9%) ಮತ್ತು ಒಕ್ಕಲಿಗರನ್ನು 60 ಲಕ್ಷ (10%) ಇದ್ದಾರೆಂದು ವರದಿಯಲ್ಲಿ ಹೇಳಿದೆ ಎನ್ನಲಾಗಿದೆ.

ಈ ಬಗ್ಗೆ ಪರ-ವಿರೋಧಗಳು ವ್ಯಕ್ತವಾಗಿವೆ. ಕೆಲವರು ಜಾರಿ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದರೆ, ಇನ್ನೂ ಕೆಲವರು ಇದನ್ನು ತಿರಸ್ಕೃತ ಮಾಡಬೇಕೆಂದು ಆಗ್ರಹಿಸಿದ್ದಾರೆ. ಇವೆಲ್ಲದರ ನಡುವೆ ಸಿಎಂ ಸಿದ್ದರಾಮಯ್ಯನವರು ವರದಿಯನ್ನು ಜಾರಿ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.ಜಾತಿ ಗಣತಿ ನನ್ನ ಕೈ ಸೇರಿದೆ ಇನ್ನೂ ಸಂಪೂರ್ಣವಾಗಿ ಒದಿಲ್ಲ,ಮುಂದಿನ ದಿನಗಳಲ್ಲಿ ಜಾರಿ ಮಾಡುತ್ತೆನೆ ಎಂದು ಮೈಸೂರಿನಲ್ಲಿ  ಸಿಎಂ ಸಿದ್ದರಾಮಯ್ಯ ಹೇಳಿಕೆ.

 

 

 

Comments (0)

Your email address will not be published. Required fields are marked *

Back to top button