ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ದರೆ, ಕಿಂಚಿತ್ತಾದರೂ ಜನಪರವಾದ ಕಾಳಜಿ ಇದ್ದರೆ ಸುಳ್ಳು ನಾಟಕವನ್ನು ಬಂದ್ ಮಾಡಬೇಕು ಎಂದು ಬಿಜೆಪಿ ನಾಯಕರ ವಿರುದ್ದ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದರು.
ದೇಶದಲ್ಲಿ ಬೆಲೆಯೇರಿಕೆಯಾಗಿದ್ದರೆ ಕೇಂದ್ರ ಸರ್ಕಾರ ಕಾರಣ. ಮನ ಮೋಹನ್ ಸಿಂಗ್ ಅವರ ಸರ್ಕಾರವಿದ್ದಾಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 118 ರಿಂದ 120 ರೂ.ವರೆಗಿದ್ದಾಗಲೂ ಪೆಟ್ರೋಲ್ ಬೆಲೆ 73 ರೂ. ಹಾಗೂ ಡೀಸೆಲ್ ಬೆಲೆ ₹46.59 ಇತ್ತು. ಇಂದು ಎಷ್ಟಾಗಿದೆ? ಎಂದು ಬಿಜೆಪಿ ನಾಯಕರಿಗೆ ಸಿಎಂ ಪ್ರಶ್ನೆ ಮಾಡಿದರು.
ಬಿಜೆಪಿ ನಾಯರು ಲಜ್ಜೆಗೆಟ್ಟವರು. 2008, 2018 ರಲ್ಲಿ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರು. ಆಪರೇಶನ್ ಕಮಲ ಮಾಡಿ ಅಧಿಕಾರಕ್ಕೆ ಬಂದವರು ನಮಗೆ ಪಾಠ ಹೇಳಲು ಬರುತ್ತಾರೆ. ಇವರು ಜನವಿರೋಧಿ ಸರ್ಕಾರ ಎಂದು ಹಣೆಪಟ್ಟಿ ಹಚ್ಚಲು ಹೊರಟಿದ್ದಾರೆ.ಟ್ವೀಟ್ ಮೂಲಕ ಬಿಜೆಪಿ ಜನಾಕ್ರೋಶಯಾತ್ರೆಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ..