ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇನೆ ಎಂದು ಹೇಳುವ ಮೂಲಕ ಸಚಿವ ಪರಮೇಶ್ವರ ಅವರು ಡಿ.ಕೆ ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಆಕಾಂಕ್ಷೆಗಳ ಬಗ್ಗೆ ಯಾರಾದರೂ ನನ್ನನ್ನು ಕೇಳಿದಾಗ, ನಾನು ಸ್ವಾಭಾವಿಕವಾಗಿಯೇ ಮುಖ್ಯಮಂತ್ರಿ ರೇಸ್‌ನಲ್ಲಿದ್ದೇನೆ ಎಂದು ಉತ್ತರಿಸುತ್ತೇನೆ. ಆದರೆ ಅಧಿಕಾರ ಪರಿವರ್ತನೆಯಾಗಿ ಡಿಕೆಶಿ ಮುಖ್ಯಮಂತ್ರಿಯಾದರೆ, ನಾವು ಅದನ್ನು ಸ್ವೀಕರಿಸುತ್ತೇವೆ ಎಂದು ಪರಮೇಶ್ವರ ಹೇಳಿದರು ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಪಕ್ಷವು ಅನುಮೋದಿಸಿದರೆ ಯಾವುದೇ ಪರಿವರ್ತನೆ ಸುಗಮವಾಗಿರುತ್ತದೆ ಎಂದು ಪರಮೇಶ್ವರ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ ಎಂದು ಡಾ.ಜಿ.ಪರಮೇಶ್ವರ ಹೇಳಿದರು. ಆದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಸ್ತಾಂತರದ ಯಾವುದೇ ಒಪ್ಪಂದದ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳಿದರು.


