Thursday, May 1, 2025
28.8 C
Bengaluru
LIVE
ಮನೆ#Exclusive Newsಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಯತ್ನಾಳ್

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಯತ್ನಾಳ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಸದ್ಯಕ್ಕೆ ಸಂಪೂರ್ಣ ರಿಲೀಫ್ ದೊರೆಯುವ ಲಕ್ಷಣ ಕಾಣಿಸುತ್ತಿಲ್ಲ. ಪ್ರಕರಣದ ಸಿಬಿಐ ತನಿಖೆ ರದ್ದುಗೊಳಿಸಿದ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಕೆಲವೇ ದಿನಗಳ ಹಿಂದೆ ವಜಾಗೊಳಿಸಿತ್ತು. ಆದರೆ, ಇದೀಗ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.

ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಇದೀಗ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿಸುವ ಸಂದೇಶ ರವಾನಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments