ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ಧಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ತಿಳಿಸಿದರು.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com