ವರದಿ : ಅಶೋಕ್ , ಮೈಸೂರು
ಮೈಸೂರು: ರಾಮ ಮಂದಿರ ಉದ್ಘಾಟನೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಲಾಭ ಎಂಬ ವಿಚಾರ,
ರಾಜಕೀಯವಾಗಿ ಅನುಕೂಲ ಆಗುತ್ತೆ ಅಂತಾ ಆತುರವಾಗಿ ರಾಮ ಮಂದಿರ ಉದ್ಘಾಟನೆ ಮಾಡಿದ್ದಾರೆ.
ರಾಮಂಮದಿರ ಪೂರ್ಣವಾಗಿ ನಿರ್ಮಾಣವಾಗಿಲ್ಲ. ರಾಮ ಮಂದಿರದಿಂದ ರಾಜಕೀಯ ಲಾಭ ಆಗುತ್ತೆ ಅನ್ನೋದು ಸಾಧ್ಯವಿಲ್ಲ. ನಮ್ಮ ದೇಶದ ಜನ ಪ್ರಜಾಪ್ರಭುತ್ವವನ್ನ ಒಪ್ಪಿಕೊಂಡಿದ್ದಾರೆ. ಅದೇ ಮುಖ್ಯವಾಗುತ್ತೆ, ಜನ ಎಲ್ಲವನ್ನು ಗಮನಿಸುತ್ತಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ.
ಜಾತಿ ಗಣತಿ ವರದಿ ವಿಚಾರ ಜಾತಿಗಣತಿ ವರದಿ ನನಗೆ ಗೊತ್ತಿಲ್ಲ. ವರದಿ ಕೊಡಕ್ಕೆ ಅವರು ಸಮಯಕ್ಕೆ ಕೇಳಿಲ್ಲ.ಕೇಳಿದ್ರೆ ಸಮಯಕೊಡುತ್ತೇವೆ. ನಂತರ ವರದಿ ಪಡೆಯುತ್ತೇವೆ. ಯಾರು ಆ ವರದಿಯನ್ನ ನೋಡಿಲ್ಲ. ಹೀಗಾಗಿ ಅದರ ಬಗ್ಗೆ ಏನು ಮಾತ್ನಾಡಲಿಕ್ಕೆ ಸಾಧ್ಯವಾಗಿಲ್ಲ. ವರದಿ ಕೊಟ್ಟ ನಂತರ ಪರಿಶೀಲನೆ ಕೂಡ ಇರುತ್ತೆ.
ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಎಂಬ ವಿಚಾರ. ಈಗಾಗಲೇ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನನಗೆ ಅವಮಾನವಾಗಿರುವ ಪಕ್ಷಕ್ಕೆ ಹೋಗಲ್ಲ ಅಂತಾ ಹೇಳಿದ್ದಾರೆ. ಅಲ್ಲೇ ಉತ್ತರ ಇದೆ ಅಲ್ವ. ಯಾರು ಎಷ್ಟೇ ಪ್ರಯತ್ನ ಮಾಡಿದ್ರು ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗಲ್ಲ. ಅವ್ರೇ ಕ್ಲಿಯರ್ಕಟ್ಟಾಗಿ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಹೇಳಿಕೆ.